ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ

Aug 15, 2025 - 20:41
 426
Facebook Join WhatsApp Join Telegram Live

ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ

Yuva Vahini - News Desk.

ಬೆಳಗಾವಿ : 30 ಬ್ಯೂಟಿ ಪಾರ್ಲರ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಶುಕ್ರವಾರ ನಗರದಲ್ಲಿ ನಡೆದಿದೆ.
ಬೆಳಗಾವಿ ನಗರದ ವಿವಿಧ ಬ್ಯೂಟಿ ಪಾರ್ಲರ್ ಗಳಲ್ಲಿ ಕೆಮಿಕಲ್ ಮಿಶ್ರಿತ ಸೌಂದರ್ಯ ವರ್ದಕಗಳ ಬಳಕೆ, ಕೂದಲು ಕಸಿ, ಸ್ಟಿರೈಡ್ ಬಳಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಲಿಖಿತ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಎಲ್ಲಾ ಪಾರ್ಲರ್ ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸುವಂತೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಡಿಹೆಚ್ ಒ ಡಾ.ಈಶ್ವರ ಗಡಾದಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ 30 ಪಾರ್ಲರ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ಕೆಮಿಕಲ್ ವಸ್ತುಗಳನ್ನು, ಸ್ಟಿರೈಡ್ಸ್ ಗಳನ್ನು ಜಪ್ತಿ ಮಾಡಿದ್ದಾರೆ. ಇದೇ ವೇಳೆ 10 ಪಾರ್ಲರ್ ಗಳನ್ನು ಸೀಜ್ ಮಾಡಿದ್ದು, 20 ಪಾರ್ಲರ್ ಗಳಿಗೆ ನೋಟಿಸ್ ನೀಡಿದ್ದಾರೆ.
Join WhatsApp Join Facebook Live Join Telegram

Tags: