ಪಶ್ಚಿಮ ಘಟಗಳಲ್ಲಿ ಭಾರಿ ಜಿಲ್ಲೆಯ ಬಹುತೇಕ ಜಲಾಶಯಗಳು ಭರ್ತಿ
Join WhatsApp | Join Telegram | Live |

Yuva Vahini - News Desk.
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಬೆಳಗಾವಿ ಜಿಲ್ಲೆಯ ಸಪ್ತನದಿಗಳು ಮೈದುಂಬಿ ಹರಿಯುತ್ತಿವೆ. ಮಲಪ್ರಭಾ, ಘಟಪ್ರಭಾ ಜಲಾಶಯಗಳು ಬಹುತೇಕ ಭರ್ತಿ ಆಗಿರುವ ಹಿನ್ನೆಲೆ ಎರಡೂ ಜಲಾಶಯಗಳಿಂದ ನೀರು ಹೊರ ಬಿಡಲಾಗುತ್ತಿದೆ.
ಮಲಪ್ರಭಾ ನದಿಗೆ ಅಡ್ಡಲಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ನವಿಲು ತೀರ್ಥ ಜಲಾಶಯ ನಿರ್ಮಿಸಲಾಗಿದೆ. ನಿರಂತರ ಮಳೆಯಿಂದಾಗಿ ಒಳಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿ ಆಗುವತ್ತ ಮುಖ ಮಾಡಿದೆ. 2,079.50 ಅಡಿ ಸಾಮರ್ಥ್ಯ ಹೊಂದಿರುವ ನವಿಲು ತೀರ್ಥ ಜಲಾಶಯದಲ್ಲಿ ಸದ್ಯ 2,077.50 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿ ಆಗಲು ಇನ್ನು ಕೇವಲ ಎರಡು ಅಡಿ ಮಾತ್ರ ಬಾಕಿ ಇದೆ. ಜಲಾಶಯ ಸುರಕ್ಷತೆಯ ದೃಷ್ಟಿಯಿಂದ ನೀರಾವರಿ ಇಲಾಖೆ ಅಧಿಕಾರಿಗಳು ನೀರನ್ನು ಹೊರಕ್ಕೆ ಬಿಟ್ಟಿದ್ದಾರೆ. 7,170 ಕ್ಯೂಸೆಕ್ ಒಳಹರಿವು ಇದ್ದರೆ, 5,594 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಕ್ಕೆ ಬಿಡಲಾಗಿದೆ.
Join WhatsApp | Join Facebook | Live | Join Telegram |