ವಿಮಾನದಲ್ಲಿ ತಾಂತ್ರಿಕ ದೋಷ ಬೆಳಗಾವಿ ಏರ್‌ಪೋರ್ಟ್‌ನಲ್ಲೇ ತುರ್ತು ಭೂಸ್ಪರ್ಶ
Join WhatsApp | Join Telegram | Live |

Yuva Vahini - News Desk.
ಬೆಳಗಾವಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನ ಬೆಳಗಾವಿ ಏರ್‌ಪೋರ್ಟ್‌ನಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಸ್ಟಾರ್ ಏರ್‌ನ S5111 ಸಂಖ್ಯೆಯ ವಿಮಾನದ ಇಂಜಿನ್‌ನಲ್ಲಿ ದೋಷ ಕಂಡುಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ವಿಮಾನದಲ್ಲಿ ಅಜಯ್ ಸುತಾರ್, ವೈಷ್ಣವ್ ಶಾನಭಾಗ, ನಾರಾಯಣ ಡೆಲ್ ಸೇರಿದಂತೆ ಸುಮಾರು 41 ಮಂದಿ ಪ್ರಯಾಣಿಕರಿದ್ದರು. ವಿಮಾನ ಟೇಕಾಫ್ ಆಗುತ್ತಿದ್ದಂತೆ ತಾಂತ್ರಿಕ ದೋಷವಿರುವುದು ಗೊತ್ತಾಗಿದೆ. ಎಚ್ಚೆತ್ತ ಪೈಲಟ್ ಕೂಡಲೇ ವಿಮಾನವನ್ನ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ. ಒಟ್ಟಿನಲ್ಲಿ ಕುಂದಾನಗರಿ ಬೆಳಗಾವಿಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
Join WhatsApp | Join Facebook | Live | Join Telegram |